ಪುತ್ತೂರು : ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಘಟನೆ ಪೋಳ್ಯ ಸಮೀಪ ನಡೆದಿದೆ.
ಘಟನೆಯಲ್ಲಿ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮೃತರನ್ನು ನೇರಳಕಟ್ಟೆ ಶಾಲಾ ಶಿಕ್ಷಕಿ ಅನಿತಾ ಎಂದು ಗುರುತಿಸಲಾಗಿದೆ.
ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ತರಲಾಗಿದೆ. ಪುತ್ತೂರು ನಗರ ಸಂಚಾರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


























