ಪುತ್ತೂರು : ಕಬಕದಲ್ಲಿ ಆರಂಭಗೊಳ್ಳಲಿರುವ ಅಂತರ್ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಪುತ್ತೂರು ಶಾಸಕ ಅಶೋಕ್ ರೈ ಅವರ ಪ್ರಯತ್ನದಿಂದ ಸುಮಾರು 22.5 ಎಕ್ರೆ ಜಾಗ ಮಂಜೂರಾಗಿದ್ದು, ಜಾಗವನ್ನು ಕರ್ನಾಟಕ ಕ್ರಿಕೆಟ್ ಅಸೋಸಿಯೇಶನ್ ಸಂಸ್ಥೆಗೆ ಹಸ್ತಾಂತರ ಮಾಡಲಾಯಿತು.

ಪುತ್ತೂರು ಸಹಾಯಕ ಕಮಿಷನರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಸ್ತಾಂತರ ಪ್ರಕ್ರಿಯೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಪುತ್ತೂರಿನಲ್ಲಿ ಅಂತರ್ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆರಂಭಗೊಳ್ಳುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಸ್ಟೇಡಿಯಂ ಕಾರಣಕ್ಕೆ ಪುತ್ತೂರು ಮುಂದಿನ ದಿನಗಳಲ್ಲಿ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲಿದೆ ಎಂದು ಹೇಳಿದರು.


























