ನವದೆಹಲಿ : ಇಂದು ಬಹುನಿರೀಕ್ಷಿತ ಕೇಂದ್ರದ ಮಧ್ಯಂತರ ಬಜೆಟ್ ಮಂಡನೆಯಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಳೆದ ಬಾರಿಯಂತೆ ಈ ಬಾರಿಯೂ ಪೇಪರ್ ಲೆಸ್ ಬಜೆಟ್ ಮಂಡಿಸಿದರು.
ಬೆಳಗ್ಗೆ 11 ಗಂಟೆಗೆ ಕೇಂದ್ರದ ಬಜೆಟ್ ಮಂಡನೆ ಶುರುವಾಗಿ 12 ಗಂಟೆ ವೇಳೆಗೆ ಮುಕ್ತಾಯಗೊಂಡಿತು. ಈ ಮೂಲಕ ಮೊರಾರ್ಜಿ ದೇಸಾಯಿ ಬಳಿಕ ಸತತ 6 ಬಾರಿ ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಮಂತ್ರಿಯಾಗಿ ದಾಖಲೆ ಬರೆದಿದ್ದಾರೆ. ಅಲ್ಲದೆ, 2019ರಿಂದ ಈವರೆಗೆ ಪೂರ್ಣಾವಧಿ ವಿತ್ತ ಮಂತ್ರಿಯಾಗಿ ಕೆಲಸ ಮಾಡಿದ ದೇಶದ ಮೊದಲ ಮಹಿಳೆ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ.
ಪ್ರಮುಖ ಹೈಲೈಟ್ ಇಲ್ಲಿದೆ..:
- ಆಯುಷ್ಮಾನ್ ಭಾರತ್ ಯೀಜನೆಯಡಿ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕರಿಗೆ ಆರೋಗ್ಯ ರಕ್ಷಣೆ ಸೇವೆ
- 7 ಲಕ್ಷ ಆದಾಯ ಇರೋರಿಗೆ ತೆರಿಗೆ ವಿನಾಯಿತಿ
- ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ
- ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಸರ್ಕಾರ ಹಣ ವ್ಯವಸ್ಥೆ ಮಾಡಲಿದೆ
- ಗರ್ಭಕಂಠದ ಕ್ಯಾನ್ಸರ್ ತಡೆಗೆ 9-14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ
- ಮೆಟ್ರೋ ರೈಲು ಇತರ ನಗರಗಳಿಗೂ ವಿಸ್ತರಣೆ- ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ
- ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್
- ಜನಸಂಖ್ಯಾ ಸ್ಫೋಟ ತಡೆಗೆ ಉನ್ನತ ಅಧಿಕಾರಿಗಳ ಸಮಿತಿ
ಯೂನಿಯನ್ ಬಜೆಟ್ ಮೊಬೈಲ್ ಅಪ್ಲಿಕೇಶನ್ ಅನ್ನು ಯೂನಿಯನ್ ಬಜೆಟ್ ವೆಬ್ ಪೋರ್ಟಲ್‌ನಿಂದ ಡೌನ್‌ಲೋಡ್ ಮಾಡಬಹುದು (www[dot]indiabudget[dot]gov[dot]in). ಇದು ಆಂಡ್ರಾಯ್ಡ್ ಮತ್ತು ಐಒಎಸ್ ಪ್ಲಾಟ್‌ಫಾರ್ಮ್‌ಗಳಲ್ಲಿಯೂ ಲಭ್ಯವಿದೆ.


























