ಬೆಳ್ತಂಗಡಿ : ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡೂರು ಕೋಟಿಕಟ್ಟೆ ಅಂಗನವಾಡಿ ಬಳಿ ನಡೆದಿದೆ.
ಫೆ.3 ರಂದು ಮಧ್ಯಾಹ್ನ ಬೆಳ್ತಂಗಡಿ ತಾಲೂಕು ಮುಂಡೂರು ಗ್ರಾಮದ ಕೋಟಿಕಟ್ಟೆ ಅಂಗನವಾಡಿ ಬಳಿ ಹಣವನ್ನು ಪಣವಾಗಿಟ್ಟು, ಕೋಳಿ ಅಂಕದ ಜೂಜಾಟ ನಡೆಯುತ್ತಿದ್ದಾಗ ಬೆಳ್ತಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಮುರಳೀಧರ ನಾಯ್ಕ್., ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದು, ಕೃತ್ಯದಲ್ಲಿ ತೊಡಗಿದ್ದವರ ಪೈಕಿ ಕೆ.ಶರತ್, ರಾಜೇಂದ್ರ ಪೂಜಾರಿ ಹಾಗೂ ವಿಠಲ ಶೆಟ್ಟಿ ಎಂಬವರನ್ನು ವಶಕ್ಕೆ ಪಡೆದು, 03 ಕೋಳಿಗಳನ್ನು, ಕೋಳಿ ಅಂಕಕ್ಕೆ ಬಳಸುವ 02 ಕತ್ತಿಗಳನ್ನು ಹಾಗೂ ಇತರ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ :-12/2024 ಕಲ;87 ಕೆ ಪಿ ಆಕ್ಟ್ 11(1)(n) OF CRUELTY TO ANIMALS ACT, 1960 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

























