ಪುತ್ತೂರು : ಪುತ್ತಿಲ ಪರಿವಾರದ ಸಮಾಲೋಚನಾ ಸಭೆ ಆರಂಭಗೊಂಡಿದ್ದು, ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು ಕೊಟೇಚಾ ಹಾಲ್ ನ ಸಭಾಂಗಣದಲ್ಲಿ ಸೇರಿದ್ದಾರೆ.

ಕೊಟೇಚಾ ಹಾಲ್ ನ ಪಾರ್ಕಿಂಗ್ ನಲ್ಲಿ ಕಾರುಗಳು ಹಾಗೂ ದ್ವಿಚಕ್ರ ವಾಹನಗಳೇ ತುಂಬಿ ತುಳುಕುತ್ತಿದ್ದು, ಸಭಾಂಗಣದಲ್ಲಿ ಕಾರ್ಯಕರ್ತರು, ಪ್ರಮುಖರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದಾರೆ.

ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದುವರೆಯಲು ಪುತ್ತಿಲ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಮತ್ತು ಆರ್ ಎಸ್‌ಎಸ್ ಜೊತೆಗಿನ ಹಲವು ಸುತ್ತಿನ ಮಾತುಕತೆಯ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗುತ್ತಿದೆ.


ವಿಧಾನಸಭೆ ಚುನಾವಣೆಯ ನಂತರ ಅವರು ಹುಟ್ಟುಹಾಕಿರುವ ಪುತ್ತಿಲ ಪರಿವಾರದ ಸಮಾಲೋಚನಾ ಸಭೆ ಆರಂಭಗೊಂಡಿದ್ದು, ಅಂತಿಮ ತೀರ್ಮಾನದ ಬಗ್ಗೆ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಯಲಿದೆ ಎನ್ನಲಾಗುತ್ತಿದೆ.




























