ಬೆಂಗಳೂರು : ಮೆಜೆಸ್ಟಿಕ್ನಿಂದ ಪೀಣ್ಯಕ್ಕೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಕಿಟಕಿ ವಿಷಯಕ್ಕೆ ಮಹಿಳೆಯರಿಬ್ಬರು ಶೂಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಬಸ್ ರಾಜಾಜಿನಗರದ ಬಳಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
ಬಸ್‌ನಲ್ಲಿ ಮಹಿಳೆಯರಿಬ್ಬರು ಪ್ರಯಾಣಿಸುತ್ತಿದ್ದಾಗ ಕಿಟಕಿ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ಜಗಳ ಶುರುವಾಗಿದೆ. ಮಾತಿಗೆ ಮಾತು ಬೆಳೆದಿದ್ದರಿಂದ ಜಗಳ ನಿಲ್ಲಲೇ ಇಲ್ಲ. ಹೀಗಾಗಿ ಜಗಳ ತಾರಕಕ್ಕೇರುತ್ತಿದ್ದಂತೆ ಇಬ್ಬರು ಮಹಿಳೆಯರು ಕಾಲಲಿದ್ದ ಶೂ ತೆಗೆದುಕೊಂಡು ಮನಸೋ ಇಚ್ಛೆ ಹೊಡೆದಾಡಿಕೊಂಡಿದ್ದಾರೆ.
ಇನ್ನು ಬಸ್‌ನಲ್ಲಿ ಈ ಇಬ್ಬರ ಜಗಳ ನೋಡಿ ಸಹ ಪ್ರಯಾಣಿಕರು ಫುಲ್ ಸುಸ್ತಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹೊಡೆದಾಡಿಕೊಳ್ಳದಂತೆ ಬುದ್ಧಿ ಹೇಳಿದ್ದಾರೆ. ಆದರೂ ಇಬ್ಬರು ಶೂನಲ್ಲಿ ಹೊಡೆದಾಡಿಕೊಂಡಿದ್ದಾರೆ ವೀಡಿಯೋವನ್ನು ಪ್ರಯಾಣಿಕರು ಸೆರೆ ಹಿಡಿದಿದ್ದಾರೆ.


























