ಪುತ್ತೂರು : ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು, ಯುವ ಒಕ್ಕಲಿಗ ಗೌಡ ಸೇವಾ ಸಂಘ ಬನ್ನೂರು ವಲಯ ಇವರ ಆತಿಥ್ಯದಲ್ಲಿ ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2024 ಫೆ.11 ರಂದು ತೆಂಕಿಲ ವಿವೇಕಾನಂದ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಫೆ.11 ರಂದು ಬೆಳಿಗ್ಗೆ 7.30 ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ತೆಂಕಿಲ ವಿವೇಕಾನಂದ ಶಾಲಾ ಕ್ರೀಡಾಂಗಣದವರೆಗೆ ಕ್ರೀಡಾಜ್ಯೋತಿ ವಾಹನ ಜಾಥ ನಡೆಯಲಿದೆ.

ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

























