ಪುತ್ತೂರು : ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟ ಉಂಟಾದ ಕುಟುಂಬಕ್ಕೆ ಪುತ್ತಿಲ ಪರಿವಾರ ಸಹಾಯಹಸ್ತ ನೀಡಿದೆ.
ಪಡೀಲು ನಾರಾಯಣ ನಾಯ್ಕ್ ಮತ್ತು ಶಿವಪ್ರಸಾದ್ ನಾಯ್ಕ್ ಎಂಬವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟವಾಗಿದೆ.

ಅವಘಡ ನಡೆದ ದಿನದಂದೆ ಅರುಣ್ ಕುಮಾರ್ ಪುತ್ತಿಲ ಹಾಗೂ ತಂಡ ಭೇಟಿ ನೀಡಿ ಸಾಂತ್ವನ ಹೇಳಿದ್ದರು.

ಫೆ.9 ರಂದು ಅವರ ಮನೆಗೆ ಭೇಟಿ ನೀಡಿ ಸಹಾಯಹಸ್ತ ನೀಡಿದರು.

ಪುತ್ತಿಲ ಪರಿವಾರದ ನಗರ ಅಧ್ಯಕ್ಷ ಅನಿಲ್ ತೆಂಕಿಲ,ಚಂದ್ರಹಾಸ ಶೆಟ್ಟಿ ಆನೆಮಜಲು,ಸತೀಶ್ ಭಂಡಾರಿ,ಪ್ರವೀಣ್ ಭಂಡಾರಿ, ಮನೀಶ್ ಕುಲಾಲ್, ಶರತ್ ರೈ ಸ್ಥಳಿಯರಾದ ಚಂದ್ರಹಾಸ್ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


























