2024-25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ.
ಹಣಕಾಸು ಸಚಿವರಾಗಿ 7 ಬಾರಿ ಹಾಗೂ ಸಿಎಂ ಆಗಿ 7 ಬಾರಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಇಂದು ತಮ್ಮ 15ನೇ ಬಜೆಟ್ ಅನ್ನು ಮಂಡಿಸುವ ಮೂಲಕ ಹೊಸ ದಾಖಲೆ ಬರೆಯುತ್ತಿದ್ದಾರೆ.
2024-25ನೇ ಸಾಲಿನ ಬಜೆಟ್ ಒಟ್ಟು ಗಾತ್ರ 3,71,383 ಕೋಟಿ ರೂಪಾಯಿ ಆಗಿದ್ದು, ಕಾಂಗ್ರೆಸ್ ಪಕ್ಷದ ಶಾಲು ಧರಿಸಿರುವ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದಾರೆ. ಕಾಂಗ್ರೆಸ್ ಶಾಸಕರು, ಸಚಿವರು ಕೂಡ ವಿಧಾನಸಭೆಗೆ ಕಾಂಗ್ರೆಸ್ ಪಕ್ಷದ ಶಾಲು ಧರಿಸಿ ಆಗಮಿಸಿದ್ದಾರೆ.


























