ಕಣ್ಣೂರು : 2003ರಿಂದ ಭೂಗತನಾಗಿ ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ ಮೋಸ್ಟ್ ವಾಂಟೆಂಡ್ ನಕ್ಸಲ್ ಅಂಗಡಿ ಸುರೇಶ್ ಕಾಡಾನೆಯಿಂದ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಅಂಗಡಿ ಸುರೇಶ್, 2003ರಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ. 21 ವರ್ಷಗಳಿಂದ ನಾಪತ್ತೆಯಾಗಿದ್ದ.
ಕರ್ನಾಟಕ-ಕೇರಳ- ತಮಿಳುನಾಡು ಪೊಲೀಸರು ಈ ಮೋಸ್ಟ್ ವಾಂಟೆಡ್ ನಕ್ಸಲ್ ಗಾಗಿ ಹುಡುಕಾಡುತ್ತಿದ್ದರು. ಆದರೆ 21 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ನಾಪತ್ತೆಯಾಗಿದ್ದ ಅಂಗಡಿ ಸುರೇಶ್ ಕಾಡಾನೆಯಿಂದ ಕೇರಳ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಈತನ ಮೇಲೆ ಕರ್ನಾಟಕದಲ್ಲಿ ಒಟ್ಟು 26ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ನಕ್ಸಲ್ ತಂಡದೊಂದಿಗೆ ಕೇರಳದ ಕಣ್ಣೂರಿನ ಕಂಚಿಕೊಲ್ಲಿ ಅರಣ್ಯ ಪ್ರದೇಶದಲ್ಲಿ ಹೋಗುತ್ತಿರುವಾಗ ನಕ್ಸಲರ ಮೇಲೆ ಕಾಡಾನೆಗಳು ದಾಳಿ ಮಾಡಿವೆ.
ಆನೆ ದಾಳಿಯಿಂದ ಗಂಭೀರ ಗಾಯಗೊಂಡ ಸುರೇಶನನ್ನು ಉಳಿದ ನಕ್ಸಲರು ಅಲ್ಲೇ ಬಿಟ್ಟು ಪರಾರಿಯಾಗಿದ್ದರು. ಆನೆ ದಾಳಿಯಿಂದ ಗಂಭೀರ ಗಾಯಗೊಂಡ ಸುರೇಶ್ ಕೇರಳ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾನೆ.