ಮಂಗಳೂರು : ವಿರೋಧ ಪಕ್ಷದ ನಾಯಕ ಅಶೋಕ್ ಅವರ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್ವೆಲ್ ಖಂಡಿಸಿದ್ದಾರೆ.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಮನವಿ ಮಾಡಿದ್ದಾರೆ.
ವಿರೋಧ ಪಕ್ಷದ ನಾಯಕ ಅಶೋಕ್ ವಿಧಾನ ಸಭೆಯಲ್ಲಿ ಬಜರಂಗದಳ ಬಗ್ಗೆ ನೀಡಿದ ಹೇಳಿಕೆ ಅಕ್ಷಮ್ಯ ಅಪರಾಧ. ಅವರ ಮಾತುಗಳು ಸಾವಿರಾರು ಹಿಂದೂ ಕಾರ್ಯಕರ್ತರ ಮನಸ್ಸಿಗೆ ನೋವನ್ನು ಉಂಟುಮಾಡಿದೆ.
ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಅಶೋಕ್ ಅವರು ವಿಧಾನ ಸಭೆಯಲ್ಲಿ ಮಾತಾಡಿದ್ದ ಹೇಳಿಕೆಗಾಗಿ ಹಿಂದೂ ಕಾರ್ಯಕರ್ತರಲ್ಲಿ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.




























