ಪುತ್ತೂರು : ಮಾ.3 ರಂದು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ದೇಶಾದ್ಯಂತ ನಡೆಯಲಿದೆ.
ಪುತ್ತೂರು ಹಾಗೂ ಕಡಬ ತಾಲೂಕಿನಾದ್ಯಂತ ನಡೆಯಲಿರುವ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ಪೋಲಿಯೋ ಲಸಿಕೆಯನ್ನು ಹಾಕಿಸಿ ಮಕ್ಕಳನ್ನು ಪೋಲಿಯೋ ರೋಗದಿಂದ ರಕ್ಷಿಸಿಕೊಳ್ಳಬೇಕಾಗಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.