ಪುತ್ತೂರು: ಇಲ್ಲಿನ ಕೊಂಬೆಟ್ಟು ಬಂಟರ ಭವನದ ಸಮೀಪ ಕಾರ್ಯನಿರ್ವಹಿಸುತ್ತಿರುವ ಪ್ರಭು ಚರುಂಬುರಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ.
ವಿಷಯ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದವರು ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಯಾವ ಕಾರಣದಿಂದಾಗಿ ಅಗ್ನಿ ಅವಘಡ ನಡೆದಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

























