ಹಾಸನ : ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ಮಾಡಲು ಮುಂದಾದ ಘಟನೆ ಸಕಲೇಶಪುರ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ನಡೆದಿದೆ.
ಆನೆ ಅಟ್ಯಾಕ್ಗೆ ಬಂದಂತೆ ಕಾರ್ಮಿಕ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಈ ವೇಳೆ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ.
ಇಬ್ಬರು ಕೂಲಿ ಕಾರ್ಮಿಕರು ಪಿಂಟು ಎಸ್ಟೇಟ್‌ನ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಕರಡಿ ಹೆಸರಿನ ಕಾಡಾನೆ ಏಕಾಏಕಿ ದಾಳಿ ಮಾಡಲು ಮುಂದಾಗಿದೆ. ಆನೆ ಬರುತ್ತಿದ್ದಂತೆಯೇ ಓರ್ವ ಕೂಲಿ ಕಾರ್ಮಿಕ ಓಡಿ ತಪ್ಪಿಸಿಕೊಂಡರೆ. ಮತ್ತೋರ್ವ ಮನೆಯ ಬಳಿಗೆ ಓಡಿ ಹೋಗಲು ಮುಂದಾಗಿದ್ದಾನೆ. ಆದರೆ ಕೂದಲೆಳೆ ಅಂತರದಲ್ಲಿ ಆನೆ ದಾಳಿಯಿಂದ ಬಚಾವ್ ಆಗಿದ್ದಾನೆ.
ಓಡಿ ಹೋಗಿ ಪ್ರಾಣ ಉಳಿಸಿಕೊಳ್ಳಲು ಮುಂದಾದ ಕೂಲಿ ಕಾರ್ಮಿಕ ನೇರವಾಗಿ ಮನೆಯ ಬಳಿ ಓಡಿ ಬಂದಿದ್ದಾನೆ. ಆದರೆ ಮನೆಗೆ ಬೀಗ ಹಾಕಿದ್ದರಿಂದ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಕೆಳಗೆ ಹೋಗಿ ಅವಿತು ಕುಳಿತಿದ್ದಾನೆ. ಕಾಡಾನೆ ಅಟ್ಯಾಕ್ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹಾಸನ ಭಾಗದಲ್ಲಿ ಕರಡಿ ಎಂಬ ಕಾಡಾನೆ ಗ್ರಾಮದ ಜನರಿಗೆ ಉಪಟಳ ನೀಡುತ್ತಿದ್ದು, ಜ.4 ರಂದು ಬೇಲೂರು ತಾಲೂಕಿನ ಮತ್ತಾವರದಲ್ಲಿ ವಂಸತ್ ಎಂಬುವವರನ್ನು ಬಲಿ ಪಡೆದಿತ್ತು. ಇದೀಗ ಕೂಲಿ ಕಾರ್ಮಿಕನ ಮೇಲೆ ಅಟ್ಯಾಕ್ ಮಾಡಲು ಮುಂದಾದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.


























