ಮಂಗಳೂರು : ಕಡಬದಲ್ಲಿ ಅಬೀನ್ ಎಂಬ ಯುವಕ ಆ್ಯಸಿಡ್ ದಾಳಿ ನಡೆಸಿದ ಹಿನ್ನೆಲೆ ಗಾಯಗೊಂಡ ಪಿಯುಸಿ ವಿದ್ಯಾರ್ಥಿನಿಯರಾದ ಅಲೀನಾ, ಅರ್ಚನ, ಅಮೃತ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅರುಣ್ ಕುಮಾರ್ ಪುತ್ತಿಲ ಅವರು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಮೂವರು ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿ ಕುಟುಂಬಸ್ಥರ ಜೊತೆ ಮಾತನಾಡಿದರು. ಆದಷ್ಟು ಶೀಘ್ರವಾಗಿ ಗುಣಮುಖವಾಗಿ ಬರಲೆಂದು ಹಾರೈಸಿದರು.

ಮಂಗಳೂರಿನ ಹಿಂದೂ ಸಂಘಟನೆಯ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.






























