ನವದೆಹಲಿ : ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಸರಣಿ ಸಭೆಗಳ ನಂತರ ಅಂತಿಮವಾಗಿ ಇಂದು (ಮಾರ್ಚ್ 08) ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೇಪಾಲ್, ಅಜಯ್ ಮಕೇನ್, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಕರ್ನಾಟಕದ 7, ತೆಲಂಗಾಣದ 4, ಛತ್ತೀಸ್ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಈ ಮೂಲಕ ಒಟ್ಟು 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡಗಡೆ ಮಾಡಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿಯೂ ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಇನ್ನು ಶಶಿ ತರೂರ್ ಅವರಿಗೆ ತಿರುವನಂತಪುರಂ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಇನ್ನು ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನ ಘೋಷಿಸಿದೆ. ವಿಜಯಪುರ, ಶಿವಮೊಗ್ಗ, ಹಾಸನ, ತುಮಕೂರು, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ, ಹಾವೇರಿ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ.
ಅಭ್ಯರ್ಥಿಗಳ ವಿವರ :



























