ಬಂಟ್ವಾಳ : ಕಂಟೈನರ್ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಖಾಸಗಿ ಬಸ್ ನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಲಾರಿ ಚಾಲಕ ಸಹಿತ ಬಸ್ ನಲ್ಲಿ ಗಾಯಗೊಂಡ ವ್ಯಕ್ತಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.
ಬಿಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೈನರ್ ಹಾಗೂ ಮೂಡಬಿದಿರೆಯಿಂದ ಬಂಟ್ವಾಳಕ್ಕೆ ಬರುತ್ತಿದ್ದ ಖಾಸಗಿ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ.

























