ಬಂಟ್ವಾಳ : ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮೆಲ್ಕಾರ್ ನಲ್ಲಿ ನಡೆದಿದೆ.
ಮೆಲ್ಕಾರ್ ನಿವಾಸಿ ಉದಯ ( 36) ಮೃತ ಯುವಕ.

ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದ ಉದಯ ಅವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಉದಯ ಅವರು ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದು, ಬೆಳಿಗ್ಗೆ ಮನೆಯವರು ಎಚ್ಚರಿಸಿದಾಗ ಯಾವುದೇ ಪ್ರತಿಕ್ರಿಯೆ ಇಲ್ಲದಿರುವುದು ಗಮನಿಸಿ, ಆಸ್ಪತ್ರೆಗೆ ಕರೆ ತಂದು ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಆಸ್ಪತ್ರೆಗೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.



























