ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ನಡೆದಿದೆ.

ಪುತ್ತೂರು ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿ ನಿಂತಿದೆ.
ಘಟನೆಯಲ್ಲಿ ಮೂರು ಮಹಿಳೆಯರು ಸೇರಿ ಆರು ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಕಾರು ಹಾಗೂ ಸ್ಕೂಟರ್ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


























