ಬಂಟ್ವಾಳ : ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರಿಪಳ್ಳದಲ್ಲಿ ಈ ಘಟನೆ ನಡೆದಿದೆ.
ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತ ಯುವಕ.
ಅಕ್ಷಿತ್ ಅವರು ಮಂಗಳೂರು ಖಾಸಗಿ ಕಂಪೆನಿಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸುಮಾರು 4 ಗಂಟೆಗೆ ಹೊರಟಿದ್ದು, 4.30 ಗಂಟೆಗೆ ಮಾರಿಪಳ್ಳ ಹೆದ್ದಾರಿ ಬದಿಯ ಮರಕ್ಕೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯುವಕ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

























