ಬೆಳ್ತಂಗಡಿ : ಆಂಬ್ಯುಲೆನ್ಸ್ ಚಾಲಕನಿಗೆ ಹಲ್ಲೆ ನಡೆಸಿರುವ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ ನಿವಾಸಿ ರಕ್ಷಿತ್ ಕುಮಾರ್, ಎಂಬವರು ಮಾ.12 ರಂದು ಮಧ್ಯಾಹ್ನ ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಲಾಯಿಲ ಜಂಕ್ಷನ್ ಎಂಬಲ್ಲಿ ಆಂಬ್ಯುಲೆನ್ಸ್ ವಾಹನವನ್ನು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕಾರನ್ನು ಅದರ ಚಾಲಕ ಆಂಬ್ಯುಲೆನ್ಸ್ ವಾಹನಕ್ಕೆ ಅಡ್ಡವಾಗಿ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು ಬಂದು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ವಾಹನಕ್ಕೆ ಸುಮಾರು 3000/-ರೂ ಗಳಷ್ಟು ಹಾನಿ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 33/2024 ಕಲಂ:504,341,323, 427, ಜೊತೆಗೆ 34 ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

























