ಪುತ್ತೂರು : ಇನ್ನೋವಾ ಕಾರು ಹಾಗೂ ಫೋರ್ಡ್ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಸಂಟ್ಯಾರ್ ಬಳಿ ನಡೆದಿದೆ.

ಘಟನೆಯಲ್ಲಿ ಇನ್ನೋವಾ ಕಾರು ಚಾಲಕ, ಉಪ್ಪಿನಂಗಡಿ ಮೂಲದ ವ್ಯಕ್ತಿ ಸಹಿತ ಹಲವರಿಗೆ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಅಪಘಾತದಿಂದ ಕಿಲೋ ಮೀಟರ್ ಗಟ್ಟಲೆ ರಸ್ತೆ ಬ್ಲಾಕ್ ಆಗಿದ್ದು, ವಾಹನ ಸವಾರರು ಸಂಕಷ್ಟಪಡುವ ಸ್ಥಿತಿ ನಿರ್ಮಾಣವಾಗಿತ್ತು.

























