ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಓರ್ವ ಶಂಕಿತನನ್ನು ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬಾಡಿ ವಾರೆಂಟ್ ಆಧಾರದ ಮೇಲೆ ಮಾಜ್ ಮುನೀರ್ನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾಜ್ ಮುನೀರ್ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ನಲ್ಲಿ ಪ್ರಮುಖ ಬಂಧಿತ ಆರೋಪಿಯಾಗಿದ್ದ. ಟ್ರಯಲ್ ಬ್ಲಾಸ್ಟ್ ಕೇಸ್ ಸಂಬಂಧ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ. ಸದ್ಯ ಎನ್ಐಎ ಅಧಿಕಾರಿಗಳು ಬಾಡಿ ವಾರೆಂಟ್ ಆಧಾರದ ಮೇಲೆ ಈತನನ್ನು 7 ದಿನಗಳ ಕಾಲ ಎನ್ಐಎ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಮಾಜ್ ಮುನೀರ್ ಶಿವಮೊಗ್ಗದ ತೀರ್ಥಹಳ್ಳಿ ನಿವಾಸಿ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

























