ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿ ಬೆಳಗ್ಗೆ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಕೆಟ್ಟು ನಿಂತಿದೆ. ಘಾಟಿಯ ತಿರುವಿನಲ್ಲಿ ಟರ್ನ್ ಮಾಡಲಾಗದೇ ಲಾರಿ ನಿಂತ ಕಾರಣ ಮುಂದೆಯೂ ಹೋಗಲಾಗದೆ, ಹಿಂದೆಯೂ ಹೋಗಲಾಗದೆ ವಾಹನಗಳ ಚಾಲಕರು ಈಗ ಪರದಾಡುತ್ತಿದ್ದಾರೆ.
ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿನಲ್ಲಿ 10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಸಂಚಾರಕ್ಕೆ ನಿಷೇಧವಿದೆ.


























