ಬೆಂಗಳೂರು : ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಇಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಡಿಸಿಎಂ, ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಅವರು ಹುಟ್ಟುಹಬ್ಬಕ್ಕೆ ಶುಭಕೋರಿದ್ದು, ಅಚ್ಚರಿಗೆ ಕಾರಣವಾಗಿದೆ.
ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ತಮ್ಮ ಫೇಸ್ಬುಕ್ ಪೇಜ್ ನಲ್ಲಿ ಡಿವಿಎಸ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
‘ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ಸಚಿವರು ಹಾಗೂ ಹಿರಿಯ ನಾಯಕರಾದ ಶ್ರೀ ಸದಾನಂದ ಗೌಡ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ಆಯಸ್ಸು ಆರೋಗ್ಯ ನೀಡಲಿ ಎಂದು ಹಾರೈಸುತ್ತೇನೆ’ ಎಂದು ಇಬ್ಬರು ಜೊತೆಗಿರುವ ಫೋಟೋ ಹಾಕಿ ಡಿಕೆಶಿ ಅವರು ತಮ್ಮ ಫೇಸ್ಬುಕ್ ಪೇಜ್ ನಲ್ಲಿ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ.
ಈ ವಿಷಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದ್ದು, ಸದಾನಂದ ಗೌಡ ಅವರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವಿಚಾರಗಳಿಗೆ ಪುಷ್ಟಿ ನೀಡುವಂತಿದೆ..


























