ಬೆಳ್ತಂಗಡಿ : ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ನಿವಾಸಿ ರೆಜಿ ಕೆ.ಎ. (47) ಅವರ ಪುತ್ರ ಅಲ್ಬಿನ್ ಕೆ.ಆರ್. ಅವರಿಗೆ ಪೋಲಂಡ್ ದೇಶದಲ್ಲಿ ಕೆಲಸಕ್ಕೆ ಹೋಗಲು ವೀಸಾ ನೀಡುವುದಾಗಿ ವಂಚಿಸಿದ ಘಟನೆ ನಡೆದಿದೆ.
ಮನೋಜ್ ಎಂಬಾತನು ವೀಸಾ ಕೊಡಿಸುವುದಾಗಿ ನಂಬಿಸಿ, 2023ರ ಮೇ ತಿಂಗಳಿಂದ 2024ರ ಮಾ. 19ರ ಅವಧಿಯಲ್ಲಿ ವಿವಿಧ ಕಾರಣಗಳನ್ನು ನೀಡಿ ಹಂತಹಂತವಾಗಿ ಒಟ್ಟು 2,50,000 ರೂ.ಗಳನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು, ವೀಸಾವನ್ನು ಕೊಡಿಸದೇ ಪಡೆದ ಹಣವನ್ನು ಹಿಂದಿರುಗಿಸದೇ ವಂಚಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

























