ಪುತ್ತೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ನೀಡಿದರು.

ನೆಟ್ಟಾರು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರ ಕುಟುಂಬದ ಜೊತೆ ಮಾತುಕತೆ ನಡೆಸಿದರು.

ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.

























