ಪುತ್ತೂರು : ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಪುತ್ತೂರು ಬೈಪಾಸ್ ರೋಡ್ ನಿವಾಸಿ ಕಲಂದರ್ ಶಾಹ ಬಂಧಿತ ವ್ಯಕ್ತಿ.
ಮಾ.20 ರಂದು ಬೆಳಿಗ್ಗೆ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಪ್ರದೇಶದಲ್ಲಿ, ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ ಪುತ್ತೂರು ನಗರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಸುಬ್ರಹ್ಮಣ್ಯ ಹೆಚ್. ರವರು ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿದ್ದು, ಈ ವೇಳೆ ಪರಾರಿಯಾಗಲು ಯತ್ನಿಸಿದ ವ್ಯಕ್ತಿಯನ್ನು ತಡೆದು ವಿಚಾರಿಸಿದ್ದು, ಸದ್ರಿ ವ್ಯಕ್ತಿ ಯಾವುದೋ ಮಾದಕ ವಸ್ತುವನ್ನು ಸೇವಿಸಿದವನಂತೆ ಕಂಡು ಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿ ನಿಷೇದಿತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 26/2024 ಕಲಂ: 27(b) NDPS ಆಕ್ಟ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

























