ಮಂಗಳೂರು : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಕ್ರಮಗಳನ್ನು ತಡೆಹಿಡಿಯಲು ಜಿಲ್ಲೆಯಲ್ಲಿ ಒಟ್ಟು 8 ಖರ್ಚು ವೆಚ್ಚ ಪರೀವೀಕ್ಷಕರರನ್ನು, 72 ಫ್ಲೈಯಿಂಗ್ ಸ್ಕ್ವ್ಯಾಡ್ (ಎಫ್.ಎಸ್.ಟಿ), 69 ಎಸ್ಎಸ್ಟಿ ತಂಡಗಳು ಮತ್ತು 8 ಅಬಕಾರಿ ತಂಡಗಳನ್ನು ಜಿಲ್ಲೆಯಾದ್ಯಂತ ನಿಯೋಜಿಸಲಾಗಿದೆ.
ಚುನಾವಣೆ ನೀತಿಸಂಹಿತೆ ಜಾರಿಯಾದ ದಿನದಿಂದ ಮಾ.20ರ ವರೆಗೆ 12,300 ರೂ. ಮೌಲ್ಯದ 21.34 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ.
3,13,500 ರೂ.ಗಳ ಮೌಲ್ಯದ 1.65 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. 2024 ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾ. 20ರ ವರೆಗೆ ದೂರವಾಣಿ ಮೂಲಕ (1950) 75 ಸಾರ್ವಜನಿಕರಿಂದ ಮಾಹಿತಿ ಕೋರಿಕೆಗಳನ್ನು ಸ್ವೀಕರಿಸಿ ವಿಲೇವಾರಿ ಮಾಡಲಾಗಿದೆ.
ಸಿ-ವಿಸಿಲ್ ಆಪ್ ಮೂಲಕ ಇಲ್ಲಿಯವರೆಗೆ 11 ದೂರುಗಳು ಸ್ವೀಕೃತಗೊಂಡಿದ್ದು, ಎಲ್ಲ ದೂರುಗಳನ್ನು ವಿಲೇವಾರಿ ಮಾಡಲಾಗಿರುತ್ತದೆ. ಎನ್ಜಿಆರ್ಎಸ್ ಪೋರ್ಟಲ್ (ರಾಷ್ಟ್ರೀಯ ಕುಂದುಕೊರತೆಗಳ ಪರಿಹಾರ ವ್ಯವಸ್ಥೆ)ಮೂಲಕ ಜಿಲ್ಲೆಯಲ್ಲಿ ಒಟ್ಟು 27 ದೂರುಗಳು ಸ್ವೀಕೃತಗೊಂಡಿದ್ದು, 22 ದೂರುಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು/ ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟನೆ ತಿಳಿಸಿದೆ.

























