ಪುತ್ತೂರು : ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಹೊರ ರಾಜ್ಯದ ಕೂಲಿ ಕಾರ್ಮಿಕರ ಮಧ್ಯೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆದ ಘಟನೆ ನಡೆದಿದೆ.

ಘಟನೆಯಲ್ಲಿ ಬ್ಲೇಡ್ ಮಾದರಿ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಓರ್ವ ಗಾಯಗೊಂಡಿದ್ದು, ಆತನನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.




























