ಧರ್ಮಸ್ಥಳ : ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಡಿ.ಕೆ. ಶಿವಕುಮಾರ್ ಬಳಿಕ ಮಂಜುನಾಥ ಸ್ವಾಮಿ ದರ್ಶನ ಪಡೆದರು.
ಈ ವೇಳೆ ಮಾತನಾಡಿದ ಡಿಸಿಎಂ, ಧರ್ಮಯುದ್ಧದಲ್ಲಿ ಯಾವಾಗಲೂ ಮಂಜುನಾಥನ ದರ್ಶನ ಪಡೆಯುತ್ತೇನೆ. ಯುದ್ಧ ಆರಂಭಿಸುವ ಮುನ್ನ ಮಂಜುನಾಥ ಮತ್ತು ಅಣ್ಣಪ್ಪ ಸ್ವಾಮಿ ದರ್ಶನ ಪಡೆಯುವ ಪದ್ದತಿ ಇಟ್ಟುಕೊಂಡಿದ್ದೇನೆ ಎಂದು ಹೇಳಿದರು.




























