ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿಯವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಇತ್ತೀಚೆಗೆ ಹೃದಯಕ್ಕೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅವರು ಈಗ ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಿದ್ದಾರೆ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಬಗ್ಗೆ ಚರ್ಚಿಸಿದ್ದು, ತಮ್ಮ ಪಕ್ಷದ ಕಡೆಯಿಂದ ಸಂಪೂರ್ಣವಾಗಿ ಬೆಂಬಲಿಸುವ ಹಾಗೂ ಚುನಾವಣಾ ಪ್ರಚಾರ ಕೈಗೊಳ್ಳುವ ಭರವಸೆ ನೀಡಿದರು ಎಂದು ಕೋಟ ತಿಳಿಸಿದರು.



























