ಕಡಬ : ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಬೆದರಿಕೆ ಹಾಕಿರುವ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ ತಾಲೂಕು ಕೋಡಿಂಬಾಳ ನಿವಾಸಿ ಮಹಿಳೆಯೋರ್ವರು ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಮಾ. 28 ರಂದು ಸಂಜೆ ಕೃಷ್ಣ ನಾಯ್ಕ ಹಾಗೂ ರಾಕೇಶ್ ಕತ್ತಿ ಮತ್ತು ದೊಣ್ಣೆಯನ್ನು ಹಿಡಿದುಕೊಂಡು ಮಹಿಳೆಯ ಮನೆಯೊಳಗೆ ಅಕ್ರಮ ಪ್ರವೇಶ ಮಾಡಿದ್ದು, ಮನೆಯೊಳಗಿದ್ದ ಮಹಿಳೆಗೆ, ಕುಟುಂಬ ಸದಸ್ಯರಿಗೆ ಬೆದರಿಕೆ ಒಡ್ಡಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ: 41/2024 ಕಲಂ:448,506, r/w 34 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.



























