ವಿಶ್ವದ ಅತ್ಯಂತ ಜನಪ್ರಿಯ ತಂಪು ಪಾನೀಯಗಳಲ್ಲಿ ಒಂದಾದ ಕೋಕಾ- ಕೋಲಾವನ್ನೇ ಹೋಲುವ ನಕಲಿ ಕೋಲಾದ ತಯಾರಿಕೆಯ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಅತ್ಯಂತ ಕೊಳಕು ಪ್ರದೇಶದಲ್ಲಿ ಕೋಕಾ- ಕೋಲಾ ರೀತಿಯ ಪಾನೀಯವನ್ನೇ ಕೋಕಾ- ಕೋಲಾದ ಲೇಬಲ್ ಇರುವ ಬಾಟಲಿಯೊಳಗೆ ತುಂಬಿಸುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.
ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ.




























