ಪುತ್ತೂರು : ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
ಉಪ್ಪಿನಂಗಡಿ ವಿಜಯ-ವಿಕ್ರಮ ಕಂಬಳ ಹಿನ್ನೆಲೆ ಪತ್ರಿಕೆಯೊಂದರಲ್ಲಿ ಜಾಹೀರಾತು ನೀಡಿದ ಹಿನ್ನೆಲೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಮಧ್ಯೆಯೂ ಕಂಬಳ ಹಿನ್ನೆಲೆ ಪತ್ರಿಕೆಯೊಂದರಲ್ಲಿ ಜಾಹೀರಾತು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ.



























