ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಬೆಳಿಗ್ಗೆ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿದ ಅವರು ಬಳಿಕ ನೂರಾರು ಕಾರ್ಯಕರ್ತರ ಜೊತೆ ತೆರಳಿ ನಾಮಪತ್ರ ಸಲ್ಲಿಸಿದರು.
ಜಯಪ್ರಕಾಶ್ ಹೆಗ್ಡೆ ಅವರು ನಾಮಪತ್ರ ಸಲ್ಲಿಸುವ ವೇಳೆ ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಡಾ.ಅಂಶುಮಂತ್ ಗೌಡ, ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಕಾಂಗ್ರೆಸ್ ಅಧ್ಯಕ್ಷ ಕೆ.ಜೆ.ಜಾರ್ಜ್ ಮತ್ತಿತರರು ಉಪಸ್ಥಿತರಿದ್ದರು.

























