ಚಿಕ್ಕಮಗಳೂರು : ಬಳ್ಳಾರಿಯಿಂದ ಸರಕನ್ನ ತುಂಬಿಕೊಂಡು ಮಂಗಳೂರಿಗೆ ಹೋಗುತ್ತಿದ್ದ ಲಾರಿ ಚಾರ್ಮಾಡಿ ಘಾಟಿಯಲ್ಲಿ ಲಾಕ್ ಆಗಿರೋದ್ರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ.

ಕಳೆದ ಮಾರ್ಚ್ 18ರಂದು ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ 16 ಚಕ್ರದ ಸಿಮೆಂಟ್ ಲಾರಿ ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಲಾಕ್ ಆಗಿ ಮಂಗಳೂರು ಹಾಗೂ ಚಿಕ್ಕಮಗಳೂರು ಎರಡೂ ಮಾರ್ಗದಲ್ಲೂ ಮೂರ್ನಾಲ್ಕು ಕಿ.ಮೀ.ನಷ್ಟು ದೂರ ಟ್ರಾಫಿಕ್ ಜಾಮ್ ಆಗಿತ್ತು.
ಇಂದು ಮತ್ತೆ ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ 12 ಚಕ್ರದ ಲಾರಿ ಲಾಕ್ ಆಗಿದೆ. ರಸ್ತೆಯ ತಿರುವಿನಲ್ಲಿ ಲಾರಿ ಟರ್ನ್ ಆಗದೆ ನಿಂತಲ್ಲಿ ನಿಂತಿದೆ. ಬೆಳಗ್ಗೆಯಿಂದಲೂ ಕೂಡ ಚಾರ್ಮಾಡಿ ಘಾಟಿಯಲ್ಲಿ ವಾಹನಗಳು ನಿಂತಲ್ಲೇ ನಿಂತು ಮುಂದೆ ಹೋಗಲಾಗದೆ ಹಿಂದೆಯೂ ಬರಲಾಗದೆ ಪರದಾಡುವಂತೆ ಆಗಿದೆ.

























