ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆ ಕಲ್ಪಿಸಿದೆ.
ಚುನಾವಣಾ ಆಯೋಗದ ಕಚೇರಿಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಗಲಾಟೆ ನಡೆಸಿದ್ದರು. ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯವು ಭದ್ರತೆ ನೀಡಿದೆ.
ಕೇಂದ್ರ ಅರೆಸೇನಾ ಪಡೆ ಸಿಆರ್‌ಪಿಎಫ್ ಮುಖ್ಯ ಚುನಾವಣಾ ಆಯುಕ್ತರಿಗೆ ಝಡ್ ಕೆಟಗರಿ ಭದ್ರತೆಯನ್ನು ಒದಗಿಸಲಿದೆ. ಸೋಮವಾರ ಚುನಾವಣಾ ಆಯೋಗದ ಕಚೇರಿಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾಗ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಟಿಎಂಸಿ ನಾಯಕರು ಮಂಗಳವಾರ ಬೆಳಗ್ಗೆ ಮಂದಿರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.



























