ಮಂಗಳೂರು : ಏ.14 ರಂದು ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಧಾನಿ ನರೇಂದ್ರ ಮೋದಿಯವರ ಸಮಾವೇಶ ಕೊನೆಯ ಕ್ಷಣದಲ್ಲಿ ರದ್ದಾಗಿದ್ದು, ಇದೀಗ ಸಮಾವೇಶದ ಬದಲಾಗಿ ಮಂಗಳೂರಿನಲ್ಲಿ ರೋಡ್ ಶೋ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ರೋಡ್ ಶೋನ ರೂಟ್ ಮ್ಯಾಪ್ ಸಿದ್ದವಾಗಿದೆ. ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಹಂಪನಕಟ್ಟೆವರೆಗೆ ಮೆಗಾ ರೋಡ್ ಶೋ ನಡೆಯಲಿದೆ.
ಎ.14ರ ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಆರಂಭವಾಗಲಿದೆ. ಸಂಜೆ 5 ಗಂಟೆ ಸುಮಾರಿಗೆ ನಾರಾಯಣ ಗುರು ಸರ್ಕಲ್ ಬಳಿ ಮೋದಿ ಆಗಮಿಸಲಿದ್ದಾರೆ. ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಬಳಿಕ ರೋಡ್ ಶೋ ಅರಂಭವಾಗಲಿದೆ.
ಲೇಡಿಹಿಲ್ ನಾರಾಯಣ ಗುರು ಸರ್ಕಲ್ ನಿಂದ ಆರಂಭವಾಗಲಿರೋ ರೋಡ್ ಶೋ ಬಳಿಕ ಲಾಲ್ ಭಾಗ್ ನ ಮಂಗಳೂರು ಪಾಲಿಕೆ ಕಚೇರಿ ಎದುರು ತಲುಪಲಿದೆ.
ಆ ಬಳಿಕ ಬಳ್ಳಾಲ್ ಭಾಗ್ ದಾಟಿ, ಎಂ.ಜಿ ರಸ್ತೆಯಲ್ಲಿ ಸಾಗಲಿರೋ ರೋಡ್ ಶೋ-ಪಿವಿಎಸ್ ಸರ್ಕಲ್ ಬಳಿ ಬಲಕ್ಕೆ ತಿರುಗಿ-ನವಭಾರತ್ ಸರ್ಕಲ್ ತಲುಪಲಿದೆ.
ಬಳಿಕ ಕೆ.ಎಸ್.ರಾವ್ ರಸ್ತೆ ಮೂಲಕ ಸಾಗಿ ಹಂಪನಕಟ್ಟೆ ಸಿಗ್ನಲ್ ಬಳಿ ರೋಡ್ ಶೋ ಅಂತ್ಯವಾಗಲಿದೆ. ಸುಮಾರು 2.5 ಕಿ.ಮೀ ರೋಡ್ ಶೋ ಸಾಗಲಿದೆ ಎಂಬ ಮಾಹಿತಿ ಲಭ್ಯವಾಗಲಿದೆ.

























