ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪರವಾಗಿ ಪ್ರಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಆಗಮಿಸಲಿದ್ದಾರೆ.
ಏ.20 ರಂದು ಬಿ.ವೈ. ವಿಜಯೇಂದ್ರ ಅವರು ಬಂಟ್ವಾಳ ಹಾಗೂ ಬೆಳ್ತಂಗಡಿಯಲ್ಲಿ ಮತ್ತು ಏ.23 ರಂದು ಅಣ್ಣಾಮಲೈ ಅವರು ಸುಳ್ಯ ಹಾಗೂ ಇನ್ನೊಂದು ಕಡೆ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.