ಪುತ್ತೂರು : ಕೆಪಿಸಿಸಿ ರಾಜ್ಯ ಪ್ರಚಾರ ಸಮಿತಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿದ್ದು, ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕರಾಗಿ ಎಚ್. ಮಹಮ್ಮದ್ ಆಲಿಯವರನ್ನು ಮಾಜಿ ಸಚಿವ ಹಾಗೂ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆಯವರು ನೇಮಕಗೊಳಿಸಿ ಆದೇಶಿಸಿರುತ್ತಾರೆ.
ಪಕ್ಷ ಸಂಘಟನೆಯಲ್ಲಿ ಅಪಾರ ಅನುಭವ ಇರುವ ಎಚ್. ಮಹಮ್ಮದ್ ಆಲಿ ಯವರು ದ.ಕ ಜಿಲ್ಲಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯಾಗಿದ್ದು, ಪ್ರಸ್ತುತ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ದಕ್ಷ ಆಡಳಿಗಾರ ಹಾಗೂ ಉತ್ತಮ ಸಂಘಟಕ ಎಂದು ಪ್ರಸಿದ್ದಿ ಪಡೆದಿರುವ ಎಚ್. ಮಹಮ್ಮದ್ ಆಲಿ ಯವರು, ಈ ಹಿಂದೆ ಪುತ್ತೂರು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯಾಗಿ,
ದ ಕ ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ರಾಜ್ಯ ಪ್ರದಾನ ಕಾರ್ಯದರ್ಶಿಯಾಗಿ 3 ಅವಧಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಕಡಬ, ಬೆಳ್ತಂಗಡಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ನ ಜಿಲ್ಲಾ ಉಸ್ತುವಾರಿಯಾಗಿ ಜವಾಬ್ದಾರಿಯನ್ನು ನಿರ್ವಹಿಸಿರುತ್ತಾರೆ.