ಮಂಗಳೂರು : ನಗರದ ಕಪಿತಾನಿಯೋ ಮತದಾನ ಕೇಂದ್ರದ ಮುಂಭಾಗ ಮಾಧ್ಯಮದ ಜೊತೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮಾತನಾಡುತ್ತಿದ್ದಾಗ ಆಕ್ಷೇಪಿಸಿದ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ಜೊತೆ ವಾಗ್ವಾದ ನಡೆದಿದ್ದು, ಪೊಲೀಸರು ಕಾರ್ಯಕರ್ತರನ್ನು ಚದುರಿಸಿದ್ದಾರೆ ಎಂದು ವರದಿಯಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಂಡಿದ್ದರು. ಆಗ ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು ಎಂದು ಕಾರ್ಯಕರ್ತನೋರ್ವ ಹೇಳಿದ್ದು, ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಅಧಿಕಾರಿ ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ಬೆಳೆಸಿದ್ದಾನೆ. ಆಗ ಪೊಲೀಸ್ ಅಧಿಕಾರಿ ಎಚ್ಚರಿಕೆ ನೀಡಿ ಕಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ವೇಳೆ ಸ್ಥಳದಲ್ಲಿ ಕೊಂಚ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.


























