ಮಂಗಳೂರು : ಹೊರವಲಯದ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ಯುವಕನೊಬ್ಬನಿಗೆ ಚೂರಿ ಇರಿದ ನಡೆದ ಘಟನೆ ನಡೆದಿದೆ.
ರೌಡಿ ಶೀಟರ್ ಪವನ್ ಎಂಬಾತ ಚೂರಿ ಇರಿತಕ್ಕೊಳಗಾದ ಯುವಕ.
ಎಸ್ಡಿಪಿಐ ಮುಖುಂಡ ಕಲಾಯಿ ಅಶ್ರಪ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಪವನ್ ಮೇಲೆ ಆತನ ಸ್ನೇಹಿತನೇ ಪೂರ್ವ ದ್ವೇಷದಲ್ಲಿ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವೈಯುಕ್ತಿಕ ದ್ವೇಷದಲ್ಲಿ ಹಲ್ಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಪವನ್ ಆಸ್ಪತ್ರೆಗೆ ದಾಖಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವರದಿಯಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

























