ಮಂಗಳೂರು : ಬಜಪೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ 24 ಕ್ಯಾರಟ್‌ನ 636 ಗ್ರಾಂ ತೂಕದ 45,79,200 ರೂ. ಮೌಲ್ಯದ ಚಿನ್ನ ಕಳ್ಳ ಸಾಗಾಟಕ್ಕೆ ಯತ್ನಿಸಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆ.25 ರಂದು ದುಬೈಯಿಂದ ಆಗಮಿಸಿದ ವ್ಯಕ್ತಿ ಸಂಶಯಾಸ್ಪದವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಆತನನ್ನು ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ಆತನ ಗುದದ್ವಾರದಲ್ಲಿ ಚಿನ್ನ ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯವನಾದ ಆತನನ್ನು ಕಸ್ಟಮ್ಸ್ ಸಿಬ್ಬಂದಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.


























