ಬೆಂಗಳೂರು : ಹಾಸನ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಸ್ ದಾಖಲಾಗಿದೆ. ತನಿಖೆ ನಡೆಸುತ್ತಿರುವ ಎಸ್.ಐ.ಟಿ ವಿಚಾರಣೆ ಹಾಜರಾಗುವಂತೆ ನೋಟಿಸ್ ಕೂಡ ನೀಡಿದೆ. ಎಸ್.ಐ.ಟಿ ನೋಟಿಸ್ ಜಾರಿಯಾದ ಬಳಿಕ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ ಸಿ.ಐ.ಡಿ ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರ ಬರಲಿದೆ ಎಂದು ಮನವಿ ಪತ್ರವನ್ನು ಟ್ವೀಟ್ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ಅವರು ವಕೀಲ ಅರುಣ್ ಜೀ ಮೂಲಕ ಎಸ್.ಐ.ಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ನಾನು ಸದ್ಯ ಬೆಂಗಳೂರಿನಿಂದ ಹೊರಗಡೆ ಇದ್ದೇನೆ. ಅಲ್ಲಿಂದ ಬರಲು 7 ದಿನಗಳು ಬೇಕಾಗಲಿದೆ. ಹೀಗಾಗಿ ಎಸ್.ಐ.ಟಿ ವಿಚಾರಣೆಯನ್ನು ಎದುರಿಸಲು ಇನ್ನೊಂದು ದಿನಾಂಕ ನೀಡಲು ಮನವಿ ಮಾಡಲಾಗಿದೆ.
ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ ನಾನು ನನ್ನ ವಕೀಲರ ಮೂಲಕ ಸಿ.ಐ.ಡಿ ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಪ್ರಜ್ವಲ್ ರೇವಣ್ಣ ಅವರು ಎಸ್ಐಟಿ ನೊಟೀಸ್‌ಗೆ 7 ದಿನ ಸಮಯಾವಕಾಶವನ್ನು ಕೇಳಿದ್ದಾರೆ.


























