ಬಂಟ್ವಾಳ : ಪ್ರತಿಷ್ಠಿತ ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಬಗ್ಗೆ ವರದಿಯಾಗಿದೆ.

ಬಂಟ್ವಾಳ ತಲಪಾಡಿಯಲ್ಲಿರುವ ಬಂಟರ ಭವನದ ಕಂಪೌಂಡ್ ನ ಒಳಗಡೆಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ.
ಸಾವಿನ ಕುರಿತು ಹೆಚ್ಚಿನ ಮಾಹಿತಿ ಮರಣೋತ್ತರ ಪರೀಕ್ಷೆಯ ಬಳಿಕ ತಿಳಿಯಬೇಕಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್, ಎಸ್.ಐ ಹರೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

























