ಉಪ್ಪಿನಂಗಡಿ : ಅಪರಿಚಿತಬ್ಬರು ಮನೆಗೆ ನುಗ್ಗಿ ಮಹಿಳೆ ಧರಿಸಿಕೊಂಡಿದ್ದ ಚಿನ್ನಾಭರಣಗಳನ್ನು ಕಸಿದುಕೊಂಡು ಪರಾರಿಯಾದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರಾಯ ನಿವಾಸಿ ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಮೇ.11 ರಂದು ಬೆಳಿಗ್ಗೆ ಮಹಿಳೆ ಮನೆಯ ಬಳಿಯಿದ್ದಾಗ, ಮನೆಯ ಅಂಗಳಕ್ಕೆ ಅಪರಿಚಿತ ಓರ್ವ ಗಂಡಸು ಮತ್ತು ಓರ್ವ ಹೆಂಗಸು ಬಂದಿದ್ದು, ಅವರುಗಳು ಮಹಿಳೆಯಲ್ಲಿ ಮಾತನಾಡಿ, ಮನೆಯಲ್ಲಿರುವ ಸದಸ್ಯರುಗಳ ಬಗ್ಗೆ ವಿಚಾರಿಸಿ, ಕುಡಿಯಲು ನೀರು ಕೇಳಿರುತ್ತಾರೆ.
ಮಹಿಳೆ ನೀರು ತರಲು ತೆರಳಿದಾಗ, ಸದ್ರಿ ಅಪರಿಚಿತರು ಮನೆಯ ಒಳಗೆ ಪ್ರವೇಶಿಸಿ, ಮನೆಯಲ್ಲಿದ್ದ ಗೋಡ್ರೇಜ್ ಬಾಗಿಲು ತೆರೆದು ಹುಡುಕಾಡುತ್ತಿರುವುದನ್ನು ಕಂಡ ಮಹಿಳೆ, ಬೊಬ್ಬೆ ಹಾಕಿ ತನ್ನ ಗಂಡನಿಗೆ ದೂರವಾಣಿ ಕರೆ ಮಾಡಲು ಯತ್ನಿಸಿದ್ದು, ಸದ್ರಿ ವ್ಯಕ್ತಿಗಳು ಮಹಿಳೆಯ ಕೈಯಲ್ಲಿದ್ದ ಮೊಬೈಲ್ ಫೋನನ್ನು ಎಳೆದು ಬಿಸಾಡಿ, ಹಲ್ಲೆ ನಡೆಸಿ, ಚೂರಿಯನ್ನು ತೋರಿಸಿ ಬೆದರಿಸಿ, ಮಹಿಳೆಯ ಕೈಯಲ್ಲಿದ್ದ ಎರಡು ಚಿನ್ನದ ಉಂಗುರಗಳನ್ನು ಹಾಗೂ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡಿರುತ್ತಾರೆ. ಈ ವೇಳೆ ನೆರೆಮನೆಯ ಮಹಿಳೆ ಬರುತ್ತಿರುವುದನ್ನು ಕಂಡ ಅಪರಿಚಿತರು ಮೋಟಾರ್ ಸೈಕಲಿನಲ್ಲಿ ಪರಾರಿಯಾಗಿದ್ದು, ಅಪರಿಚಿತರು ದೋಚಿದ ಆಭರಣಗಳ ಮೌಲ್ಯ ಅಂದಾಜು ಮೌಲ್ಯ ರೂ 1,00,000/- ಆಗಬಹುದು ಎಂಬುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 58/2024 ಕಲಂ:450,394 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

























