ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 19 ಮತ್ತು 20 ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಸೂಚಿಸಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.
11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ.
ಮೇ 18 ಮತ್ತು 21 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಈ ದಿನಗಳಲ್ಲಿ 6.45 ಸೆಂ.ಮೀ ಮತ್ತು 11.55 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ.


























