ಮಂಗಳೂರು:ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡಿರುವ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಕಪ್ಪು ಬಣ್ಣದ ಕಾರಿನಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧವಾದ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡು ಯಾವುದೋ ದುಷ್ಕೃತ್ಯವನ್ನು ನಡೆಸುವುದಕ್ಕಾಗಿ ತಿರುಗಾಡುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಅಕ್ರಮ ಪಿಸ್ತೂಲ್ ಹೊಂದಿದ ಮೊಹಮ್ಮದ್ ಅಸ್ಕರ್(26), ವಾಸ: ಮೊರ್ತಾನ ಮನೆ, ಮುರ್ತಾನ ಕಡಂಬರ್ ಪೋಸ್ಟ್, ಮಂಜೇಶ್ವರ, ಕಾಸರಗೋಡು ಜಿಲ್ಲೆ, ಕೇರಳ ರಾಜ್ಯ ಹಾಗೂ ಅಬ್ದುಲ್ ನಿಸಾರ್.ಕೆ(29), ವಾಸ: ಬೆಜ್ಜಾ ಮನೆ, ಮೂಡಂಬೈಲ್ ಅಂಚೆ, ಮಂಜೇಶ್ವರ, ಕಾಸರಗೋಡು ಜಿಲ್ಲೆ, ಕೇರಳ ರಾಜ್ಯ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.
ಅರೋಪಿಗಳಿಂದ ಪಿಸ್ತೂಲ್-1, ಸಜೀವ ಮದ್ದುಗುಂಡುಗಳು-2, ಮೊಬೈಲ್ ಫೋನುಗಳು-2, ಹಾಗೂ ಕಪ್ಪು ಬಣ್ಣದ ಹುಂಡೈ ವೆರ್ನಾ ಕಾರನ್ನು ವಶಪಡಿಸಿಕೊಳ್ಳಲಾಗಿದ್ದು. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 7,15,000/-ಅಗಿದ್ದು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಯ ಪೈಕಿ ಮೊಹಮ್ಮದ್ ಅಸ್ಗರ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಅಪಹರಣ, ಹಲ್ಲೆ ಪ್ರಕರಣ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹಾಗೂ ಬೆಂಗಳೂರು ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟದ ಪ್ರಕರಣ ಹೀಗೆ ಒಟ್ಟು 8 ಪ್ರಕರಣಗಳು ದಾಖಲಾಗಿದೆ.
ಆರೋಪಿಗಳ ಹಾಗೂ ಅಕ್ರಮ ಪಿಸ್ತೂಲ್ ಪತ್ತೆ ಕಾರ್ಯವನ್ನು ಮಾನ್ಯ ಪೊಲೀಸ್ ಆಯುಕ್ತರವರಾದ ಶ್ರೀ ಅನುಪಮ್ ಅಗ್ರವಾಲ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಸುದೀಪ್ ಎಂ ವಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

























