ಶಿರಾಡಿ : ಬೆಂಗಳೂರಿನಿಂದ ಮಂಗಳೂರು ಕಡೆಗೆ ಒಂದೇ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರೊಂದು ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತಗೊಂಡ ಪರಿಣಾಮ ತಾಯಿ-ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಇತರರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ತಿಳಿದು ಬಂದಿದೆ.
ಮೃತಪಟ್ಟವರನ್ನು ಪಾಣೆಮಂಗಳೂರು ಬೊಂಡಾಲದ ಶಬ್ಬೀರ್ ಎಂಬವರ ಮಗ ಮೊಹಮ್ಮದ್ ಶಫೀಕ್(20) ಹಾಗೂ ಅವರ ಪತ್ನಿ ಸಫಿಯಾ(50) ಎಂದು ಗುರುತಿಸಲಾಗಿದೆ.
ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ ಮೂವರು ಮಕ್ಕಳು ಕೂಡಾ ಇದ್ದು, ಅವರಿಗೂ ಕೂಡ ಗಂಭೀರ ಸ್ವರೂಪದ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ನಿನ್ನೆ ಸಂಬಂಧಿಕರೋರ್ವರ ಮದುವೆ ಔತಣಕೂಟ ಸಮಾರಂಭದಲ್ಲಿ ಭಾಗವಹಿಸಿ, ಹಿಂದಿರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.


























